ಉದಯವಾಹಿನಿ, ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು.
