ಉದಯವಾಹಿನಿ, ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಯಾವುದೇ ಸಮಯದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.
