ಉದಯವಾಹಿನಿ, ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ್ದು, ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರು ಹತ್ಯೆಯಾಗಿದ್ದಾರೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ ನಡುವೆ ಗುರುವಾರ ಮುಂಜಾನೆ 2:20ಕ್ಕೆ ರೋಹಿಣಿಯ ಡಾ. ಅಂಬೇಡ್ಕರ್ ಚೌಕ್‌ನಿಂದ ಪನ್ಸಾಲಿ ಚೌಕ್‌ವರೆಗಿನ ಬಹದ್ದೂರ್ ಷಾ ಮಾರ್ಗದಲ್ಲಿ ಗುಂಡಿನ ಚಕಮಕಿ ನಡೆದಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಪೊಲೀಸರು ಸಿಗ್ಮಾ ಗ್ಯಾಂಗ್‌ನ ದರೋಡೆಕೋರರನ್ನು ಹಿಡಿಯಲು ಪ್ರಯತ್ನಿಸಿದ ವೇಳೆ ದರೋಡೆಕೋರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಎನ್‌ಕೌಂಟರ್ ನಡೆಸಿದ್ದಾರೆ.
ಗುಂಡಿನ ದಾಳಿಯಲ್ಲಿ ನಾಲ್ವರು ಆರೋಪಿಗಳಿಗೂ ಗುಂಡು ತಾಗಿದ್ದು, ಅವರನ್ನು ರೋಹಿಣಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ನಾಲ್ವರು ದರೋಡೆಕೋರರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ದರೋಡೆಕೋರರು ಯಾರು?: ದರೋಡೆಕೋರರನ್ನು ರಂಜನ್ ಪಾಠಕ್ (25), ಬಿಮ್ಲೇಶ್ ಮಹ್ತೊ (25), ಮನೀಶ್ ಪಾಠಕ್ (33), ಮತ್ತು ಅಮನ್ ಠಾಕೂರ್ (21) ಎಂದು ಗುರುತಿಸಲಾಗಿದೆ. ರಂಜನ್ ಪಾಠಕ್ ಈ ಗ್ಯಾಂಗ್‌ನ ನಾಯಕನಾಗಿದ್ದ. ಹಲವಾರು ವರ್ಷಗಳಿಂದ ಈ ಸಿಗ್ಮಾ ಗ್ಯಾಂಗ್ ಬಿಹಾರದಾದ್ಯಂತ ಸುಲಿಗೆ ಮತ್ತು ಕಾಂಟ್ರಾಕ್ಟ್ ಪಡೆದು ಹತ್ಯೆ ನಡೆಸುವುದರಲ್ಲಿ ಭಾಗಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!