
ಉದಯವಾಹಿನಿ, ಹೈದರಾಬಾದ್ : ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್ ಕೂಡ ಸಾವನ್ನಪ್ಪಿದ್ದಾರೆ. ಎಂಜಿನಿಯರ್‌ಗಳಾದ ಅನುಷಾ, ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಮೃತ ದುರ್ದೈವಿಗಳು
ದೀಪಾವಳಿ ಮುಗಿಸಿಕೊಂಡು ಬರ್ತಿದ್ದ ಅನುಷಾ
ಮಹೇಶ್ವರಂ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ ಜಿಲ್ಲೆಯ ವಸ್ತಕೊಂಡೂರು ಗ್ರಾಮದವರು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬ ಮುಗಿಸಿ ಬರುತ್ತಿದ್ದ ಅನುಷಾ ಇಂದು ಬೆಳಗ್ಗಿನ ಜಾವ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಸಾಫ್ಟ್‌ವೇರ್ ಎಂಜಿನಿಯರ್ ಧಾತ್ರಿ ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಬಾಪಟ್ಲ ಜಿಲ್ಲೆಯವರು. ಮಾವನ ಮನೆಯಿಂದ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಬದುಕು ದುರಂತ ಅಂತ್ಯಕಂಡಿದೆ.
