ಉದಯವಾಹಿನಿ, ನ್ಯೂಯಾರ್ಕ್: ಈ ಹಿಂದೆ ಭಾರತದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮೂನ್ ಲೈಟಿಂಗ್ ಇದೀಗ ಅಮೆರಿಕದಲ್ಲೂ ಸುದ್ದಿ ಮಾಡುತ್ತಿದ್ದು, ಭಾರತ ಮೂಲದ ವ್ಯಕ್ತಿ 15 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಅಮೆರಿಕದ ನ್ಯೂಯಾರ್ಕ್‌ನ ಸರ್ಕಾರಿ ಕಚೇರಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಕೆಲಸ ಮಾಡುತ್ತಾ ಬೇರೊಂದು ಸಂಸ್ಥೆಗೆ ಅನೌಪಚಾರಿಕವಾಗಿ ಕೆಲಸ ಮಾಡುತ್ತಿದ್ದ (ಮೂನ್‌ಲೈಟ್‌) ಭಾರತ ಮೂಲದ 39 ವರ್ಷದ ವ್ಯಕ್ತಿಯನ್ನು ‘ಮಹಾ ದ್ರೋಹ’ ಎಂದು ಕರೆದಿರುವ ಅಲ್ಲಿನ ನ್ಯಾಯಾಲಯ, 15 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.
ಭಾರತ ಮೂಲದ ನೌಕರ ಮೆಹುಲ್ ಗೋಸ್ವಾಮಿ ಶಿಕ್ಷೆಗೆ ಗುರಿಯಾದ ನೌಕರನಾಗಿದ್ದು, ಒಂದು ಉದ್ಯೋಗದ ಗುತ್ತಿಗೆ ಸಕ್ರಿಯವಾಗಿರುವಾಗ ಅದರ ನಿಯಮ ಉಲ್ಲಂಘಿಸಿ ಬೇರೆ ಕೆಲಸ ಮಾಡುವುದು ತೆರಿಗೆದಾರರ 50 ಸಾವಿರ ಡಾಲರ್‌ (43 ಲಕ್ಷ ರೂ) ವಂಚಿಸಿದ ಅಪರಾಧಕ್ಕೆ ಸಮ ಎಂದು ಸರಟೊಗಾ ಕೌಂಟಿ ಶೆರೀಫ್‌ ಕಚೇರಿಯು ಅಭಿಪ್ರಾಯಪಟ್ಟಿದೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. ಮೆಹುಲ್ ಗೋಸ್ವಾಮಿ ನ್ಯೂಯಾರ್ಕ್ ನಲ್ಲಿ ಅಲ್ಲಿನ ರಾಜ್ಯ ಸರ್ಕಾರಿ ಸ್ವಾಮ್ಯದ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಬೇರೊಂದು ಖಾಸಗಿ ಕಂಪನಿಯಲ್ಲಿ (ಗ್ಲೋಬಲ್ ಫೌಂಡರೀಸ್) ಕಂಟ್ರಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಅಲ್ಲದೆ ನ್ಯೂಯಾರ್ಕ್ ನಲ್ಲಿ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ 50 ಸಾವಿರ ಡಾಲರ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪಗಳಿದ್ದು ತನಿಖೆಯಲ್ಲಿ ಹಾಗೂ ವಿಚಾರಣೆಯಲ್ಲಿ ಆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗೋಸ್ವಾಮಿಗೆ ಶಿಕ್ಷೆ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!