ಉದಯವಾಹಿನಿ, ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸದನದಲ್ಲಿ ನೀಡಿದ ಒಂದೇ ಒಂದು ಹೇಳಿಕೆಯಿಂದ ಭಾರೀ ಟ್ರೋಲ್ ಆಗುತ್ತಿದ್ದಾರೆ. ಅವರನ್ನು ಬೆಂಬಲಿಸಿದ್ದ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಕೂಡ ಟ್ರೋಲ್‌ಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ವಿಡಿಯೋ ಭಾರೀ ವೈರಲ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ನಯನ ಮೋಟಮ್ಮ ಸ್ಪಷ್ಟನೆಯನ್ನು ನೀಡಿದ್ದು, ಅಭಿಮಾನಿಗಳಿಗೆ ಸಮಾಧಾನದಿಂದ ವರ್ತಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ನಯನಾ ಮೋಟಮ್ಮ, ಸಾವಾಗಿಲ್ಲ ಮಾರ್ರೆ ನಿಜ ಎಂದೇ ತಮ್ಮ ವಾಕ್ಯವನ್ನು ಪ್ರಾರಂಭಿಸಿದ್ದಾರೆ. ಅಭಿಮಾನಿಗಳು ಟ್ರೋಲ್ ಮಾಡುವ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು. ಪ್ರದೀಪ್ ಈಶ್ವರ್ ಅವರು ಹೇಳಿರುವ ವಿಚಾರದಲ್ಲಿ ಯಾವ ತಪ್ಪು ಇಲ್ಲ. ಮಾಹಿತಿ ಕೊರತೆಯಿದ್ದಿರಬಹುದು ಅಷ್ಟೇ. ಆದರೆ, ಅವರು ಹೇಳಿರುವ ವಿಚಾರ, ಎತ್ತಿರುವ ಪ್ರಶ್ನೆ ಎರಡೂ ಸರಿಯಾಗಿಯೇ ಇದೆ. ಹಾಗಾಗಿಯೇ ನಾನು ಸಹ ಅವರ ಮಾತನ್ನು ಬೆಂಬಲಿಸಿದ್ದೇನೆ ಎಂದು ಸದನದಲ್ಲಿನ ತಮ್ಮ ವರ್ತನೆಗೆ ಸ್ಪಷ್ಟನೆ ನೀಡಿದ್ದಾರೆ.
