ಉದಯವಾಹಿನಿ , ಆನೇಕಲ್: ಕಂಟೈನರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ ನಡೆದಿದೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ರಸ್ತೆಯ ಕೇಬಲ್ ಡ್ರಿಲ್ಲಿಂಗ್ ಮಿಷನ್ ತುಂಬಿದ್ದ ಕಂಟೈನರ್ ಇಳಿಜಾರಿನ ತಿರುವಿನಲ್ಲಿ ಅತಿವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆಯ ಪರಿಣಾಮ ಇಬ್ಬರು ಕಾರ್ಮಿಕರು ಕಂಟೈನರ್ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳಿಗೆ ಜಿಗಣಿಯ ವಿಜಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
