ಉದಯವಾಹಿನಿ , ರಾಮನಗರ: ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬೇಸರ ಹೊರಹಾಕಿದರು. ಸೊಸೈಟಿ ಚುನಾವಣೆ ಹಿನ್ನೆಲೆ ಬಣ ರಾಜಕೀಯ ಮಾಡ್ತಿದ್ದ ಕಾರ್ಯಕರ್ತರನ್ನ ತರಾಟೆಗೆ ತೆಗೆದುಕೊಂಡ ನಿಖಿಲ್, ಶಿಸ್ತಿನ ಪಾಠ ಮಾಡಿದರು.
ಸ್ಥಳೀಯ ಮುಖಂಡರ ಒತ್ತಡಕ್ಕೆ ಮಣಿದು ನಾನು ಚುನಾವಣೆಗೆ ಬಂದೆ. ನಾನು ಹೇಡಿ ಅಲ್ಲ, ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ, ಆದರೆ ಅವತ್ತು ಕಣ್ಣೀರು ಹಾಕಿದೆ. ಈಗ ಸೊಸೈಟಿ ಚುನಾವಣೆ ಬಗ್ಗೆ ಪ್ರಶ್ನೆ ಮಾಡ್ತಿದ್ದೀರಲ್ಲಾ. ಜಿಲ್ಲೆಯ ಜನ ನನಗೆ ಅಧಿಕಾರ ಕೊಟ್ಟಿದ್ದೀರಾ? ನನಗೆ ಒಂದು ಬಾರಿಯಾದ್ರೂ ಆಶೀರ್ವಾದ ಮಾಡಿದ್ದೀರಾ? ಕುಮಾರಣ್ಣ 1,200 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ರು. ಆದರೆ ಇಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಬೆಲೆ ಇಲ್ಲ ಎಂದು ಬೇಸರಿಸಿದರು.

Leave a Reply

Your email address will not be published. Required fields are marked *

error: Content is protected !!