ಉದಯವಾಹಿನಿ , ಚಿಕ್ಕೋಡಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ಅಥಣಿ ಕೈ ಶಾಸಕ ಲಕ್ಷ್ಮಣ ಸವದಿ ವ್ಯಕ್ತಪಡಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಸಂಪುಟ ಪುನರ್ ರಚನೆ ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!