ಉದಯವಾಹಿನಿ , ತುಮಕೂರು: ಸಂಪುಟ ಪುನಾರಚನೆ ಯಾರು ಮಾಡುತ್ತಾರೋ ಅವರೇ ಸಿಎಂ ಆಗಲಿದ್ದಾರೆ ಅಥವಾ ಮುಂದುವರಿಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ರಾಜಣ್ಣ, ಸಿಎಂ ಸಿದ್ದರಾಮಯ್ಯರಿಗೆ ಸಂಪುಟ ಪುನಾರಚನೆ ಮಾಡಲು ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯೋದು ಖಚಿತ. ಇಲ್ಲ ಅಂದರೆ ರಾಜಕೀಯದಲ್ಲಿ ಯಾವುದೇ ಬೆಳವಣಿಗೆ ನಡೆಯಬಹುದು ಎಂದು ರಾಜಣ್ಣ ಪರೋಕ್ಷವಾಗಿ ನವೆಂಬರ್ ಕ್ರಾಂತಿ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಎಲ್ಲವೂ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ನಡೆಯಲಿದೆ. ಅಲ್ಲಿಯವರೆಗೂ ಯಾವುದೇ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯರೇ ಮುಂದುವರಿಯಬಹುದೂ ಅನ್ನೋದನ್ನು ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ.
