ಉದಯವಾಹಿನಿ, ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪಂಚಾಯತ್ ಪ್ರತಿನಿಧಿಗಳಿಗೆ 50 ಲಕ್ಷ ಪಿಂಚಣಿ ಮತ್ತು ವಿಮಾ ರಕ್ಷಣೆ ನೀಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಣೆ ಮಾಡಿದ್ದಾರೆ. ಈಗಾಗಲೇ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಭರವಸೆ ನೀಡಿದ್ದಾರೆ. ನಾಲ್ಕು ಕಾರ್ಯಕ್ರಮಗಳನ್ನು ಹಮಿಕೊಂಡಿದ್ದು, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮೈತ್ರಿಕೂಟದ ಭರವಸೆ ಪ್ರಕಟಿಸಿದ್ದಾರೆ. ನಾವು ಮೂರು ಹಂತದ ಪಂಚಾಯತ್ ಪ್ರತಿನಿಧಿಗಳಿಗೆ (ತಾಲೂಕು, ಜಿಲ್ಲೆ, ಗ್ರಾಮ ಪಂಚಾಯಿತಿ) ಪಿಂಚಣಿ ಯೋಜನೆ ಜಾರಿಗೆ ತರುತ್ತೇವೆ. 50 ಲಕ್ಷ ರೂ.ವರೆಗೆ ವಿಮೆ ಸಹ ಒದಗಿಸಲಾಗುವುದು. ಪಿಡಿಎಸ್ ವಿತರಕರಿಗೆ ಗೌರವಧನ ನೀಡಲಾಗುವುದು ಹಾಗೂ ಪ್ರತಿ ಕ್ವಿಂಟಾಲ್‌ಗೆ ಮಾರ್ಜಿನ್ ಹಣ ಹೆಚ್ಚಿಸಲಾಗುವುದು.ಅಲ್ಲದೇ ಕುಂಬಾರರು, ಕಮಾರರು ಮತ್ತು ಬಡಗಿಗಳಂತಹ ಶ್ರಮಜೀವಿಗಳಿಗೆ 5 ಲಕ್ಷ ರೂಪಾಯಿಗಳ ವರೆಗೆ ಆರ್ಥಿಕ ನೆರವು ನೀಡುವುದಾಗಿ ಅವರು ಘೋಷಿಸಿದರು.
5 ವರ್ಷದಲ್ಲಿ 5 ಲಕ್ಷ ರೂ. ಏಕಕಾಲಿಕ ನೆರವು, ಸರ್ಕಾರಿ ಉದ್ಯೋಗಗಳಿಗೆ ಅನುಕಂಪದ ನೇಮಕಾತಿಗಳಿಗೆ 58 ವರ್ಷ ವಯಸ್ಸಿನ ಮಿತಿ ತೆಗೆದುಹಾಕುವುದಾಗಿಯೂ ಭರವಸೆ ನೀಡಿದ್ದಾರೆ. ಚುನಾವಣಾ ಪ್ರಚಾರ ತೀವ್ರಗೊಂಡಿದೆ ಮತ್ತು ಬಿಹಾರ ಬದಲಾವಣೆಗೆ ಹಾತೊರೆಯುತ್ತಿದೆ. ಪ್ರಸ್ತುತ ಅಧಿಕಾರದಲ್ಲಿರುವ ನಿತೀಶ್ ಕುಮಾರ್ ಸರ್ಕಾರವನ್ನು ಟೀಕಿಸಿದ ತೇಜಸ್ವಿ ಯಾದವ್, ಬಿಹಾರದಲ್ಲಿ 20 ವರ್ಷಗಳಿಂದ ನಿಷ್ಕಿಯ ಸರ್ಕಾರವಿದೆ ಮತ್ತು ಈಗ ಸಾರ್ವಜನಿಕರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ತಾನು ಎಲ್ಲಿಗೆ ಹೋದರೂ, ಎಲ್ಲಾ ಜಾತಿ ಮತ್ತು ಧರ್ಮದ ಜನರು ಅವರನ್ನು ಬೆಂಬಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದರು.ಜನರು ಪ್ರಸ್ತುತ ಸರ್ಕಾರದಿಂದ ಬೇಸತ್ತಿದ್ದಾರೆ ಮತ್ತು ಬಿಹಾರ ಸರ್ಕಾರವನ್ನು ಬದಲಾಯಿಸಲು ಬಯಸುತ್ತಾರೆ. ಈ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ಮತ್ತು ಅಪರಾಧಗಳು ವ್ಯಾಪಕವಾಗಿವೆ ಮತ್ತು ಜನರು ಬಿಜೆಪಿಯನ್ನು ಅರ್ಥಮಾಡಿಕೊಂಡಿದ್ದಾರೆ ಎಂದರು. ಪ್ರಚಾರ ಶುರುವಾದಾಗಿನಿಂದ ಬಿಹಾರ ಬದಲಾವಣೆಗಾಗಿ ಕಾತರದಿಂದ ಕಾಯುತ್ತಿದೆ. ಎನ್‌ಡಿಎ ದೃಷ್ಟಿಹೀನ ಸರ್ಕಾರ, ಭ್ರಷ್ಟ ಸರ್ಕಾರ. ಈ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಬಜೆಟ್‌ನಲ್ಲಿ ಬಿಹಾರಕ್ಕೆ ಬರಬೇಕಾದ ಹಣ ಗುಜರಾತ್‌ಗೆ ಹೋಗುತ್ತಿದೆ ಎಂದು ಕಿಡಿ ಕಾರಿದರು.
