ಉದಯವಾಹಿನಿ,ಮಂಗಳೂರು: ಅಂಗಡಿ ಮಾಲೀಕನೊಬ್ಬ ತನ್ನ ಕೂಲಿ ಕಾರ್ಮಿಕನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ, ವಿದ್ಯುತ್ ಶಾಕ್‌ನಿಂದ ಆತ ಸಾವನ್ನಪ್ಪಿದ್ದಾನೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ನಡೆದಿದ್ದು, 32 ವರ್ಷದ ಕಿರಾಣಿ ಅಂಗಡಿ ಮಾಲೀಕನನ್ನು ಮುಳಿಹಿತ್ಲುವಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸರು ಸುತ್ತಮುತ್ತಲಿನ ಸ್ಥಳೀಯ ನಿವಾಸಿಗಳನ್ನು ವಿಚಾರಣೆಗೊಳಪಡಿಸಿದ ನಂತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿ ತೌಸಿಫ್ ಹುಸೇನ್‌ನನ್ನು ಶನಿವಾರ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಮಾಲೀಕ ತನ್ನ ಕಾರ್ಮಿಕ ಗಜ್ಞಾನ ಎಂಬಾತನಿಗೆ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. ನಮತ್ರ, ಅದನ್ನು ವಿದ್ಯುದಾಘಾತ ಎಂದು ತಪ್ಪಾಗಿ ಬಿಂಬಿಸಲು ಯತ್ನಿಸಿದ್ದಾನೆ. ಸಣ್ಣ ವಿವಾದಕ್ಕೆ ಆರೋಪಿಗಳು ಗಜ್ಞಾನನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಅಪರಾಧವನ್ನು ಮುಚ್ಚಿಹಾಕಲು, ಗಜ್ಞಾನನಿಗೆ ವಿದ್ಯುತ್ ತಗುಲಿದೆ ಎಂದು ಆ ಪ್ರದೇಶದ ಜನರಿಗೆ ಸುಳ್ಳು ಮಾಹಿತಿ ನೀಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವನನ್ನು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಘಟನೆಯನ್ನು ಕೊಲೆ ಎಂದು ಖಚಿತಪಡಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
