ಉದಯವಾಹಿನಿ, ನವದೆಹಲಿ: ಭಾರತ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ದಕ್ಷಿಣ ಆಫ್ರಿಕಾ ತಂಡವನ್ನು (South ಪ್ರಕಟಿಸಲಾಗಿದೆ. ಗಾಯದಿಂದ ಗುಣಮುಖರಾಗಿರುವ ನಾಯಕ ತೆಂಬಾ ಬವೂಮಾ ತಂಡಕ್ಕೆ ಮರಳಿದ್ದಾರೆ ಹಾಗೂ ಎಂದಿನಂತೆ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಲಿದ್ದಾರೆ. ಎಡಗಾಲಿನ ಗಾಯದ ಕಾರಣ ತೆಂಬಾ ಬವೂಮಾ ಅವರು ಪಾಕಿಸ್ತಾನ ವಿರುದ್ದದ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಸ್ಪಿನ್ ಸ್ನೇಹಿ ಭಾರತದ ಕಂಡೀಷನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಲು ಎದುರು ನೋಡುತ್ತಿದ್ದಾರೆ.
ಪಾಕಿಸ್ತಾನ ವಿರುದ್ಧ ಟೆಸ್ಟ್ ಸರಣಿಯನ್ನು ಆಡಿದ ಬಹುತೇಕ ಅದೇ ಆಟಗಾರರನ್ನು ಭಾರತ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಪಾಕ್ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ದಕ್ಷಿಣ ಆಫ್ರಿಕಾ ತಂಡ, ಎರಡನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಕಮ್‌ಬ್ಯಾಕ್ ಮಾಡಿತ್ತು. ಇದರೊಂದಿಗೆ ಹರಿಣ ಪಡೆ ಟೆಸ್ಟ್ ಸರಣಿಯನ್ನು 1-1 ಅಂತರದಲ್ಲಿ ಡ್ರಾ ಸಾಧಿಸಿತ್ತು.
ಗಾಯದಿಂದ ಗುಣಮುಖರಾಗಿರುವ ತೆಂಬಾ ಬವೂಮಾ ಅವರು ಭಾರತ ಎ ವಿರುದ್ಧ ದಕ್ಷಿಣ ಆಫ್ರಿಕಾ ಎ ಪರ ಆಡುವ ಮೂಲಕ ಫಾರ್ಮ್ ಕಂಡುಕೊಳ್ಳಲು ಎದುರು ನೋಡುತ್ತಿದ್ದಾರೆ. ಈ ಪಂದ್ಯದ ಅಕ್ಟೋಬರ್ 30 ರಿಂದ 9ರವರೆಗೆ ನಡೆಯಲಿವೆ. ಈ ಪಂದ್ಯಗಳು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ನಡೆಯಲಿದೆ. ಈ ಅಭ್ಯಾಸದ ಪಂದ್ಯಗಳ ಮೂಲಕ ದಕ್ಷಿಣ ಆಫ್ರಿಕಾ ತಂಡದ ಆಟಗಾರರಿಗೆ ಇಲ್ಲಿನ ಕಂಡೀಷನ್ಸ್‌ಗೆ ಹೊಂದಿಕೊಳ್ಳಲು ನೆರವಾಗಲಿದೆ.
