ಉದಯವಾಹಿನಿ, ಬೆಂಗಳೂರು: ಆರ್‌ಎಸ್‌ಎಸ್, ಗೂಗಲ್ ವಿಚಾರದಲ್ಲಿ ಸುದ್ದಿಯಾಗಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಈಗ ಅಸ್ಸಾಂ ವಿಚಾರದಲ್ಲೂ ದೊಡ್ಡ ಸುದ್ದಿಯಾಗಿದ್ದಾರೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಿಯಾಂಕ್ ಖರ್ಗೆಯಲ್ಲಿ ಈಡಿಯಟ್ ಎಂದು ಕರೆದರೆ ಪ್ರಿಯಾಂಕ್ ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಸೆಮಿಕಂಡಕ್ಟರ್ ಫ್ಯಾಕ್ಟರಿ ಕಂಪನಿಗಳು ತಮ್ಮ ಘಟಕವನ್ನು ತೆರೆಯಲು ಗುಜರಾತ್ ಮತ್ತು ಅಸ್ಸಾಂ ರಾಜ್ಯಗಳನ್ನು ಆಯ್ಕೆ ಮಾಡಿದ್ದವು. ಈ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಸೆಮಿಕಂಡಕ್ಟರ್ ಉದ್ದಿಮೆಗಳು ಸಹಜವಾಗಿಯೇ ಬೆಂಗಳೂರಿನತ್ತ ಆಕರ್ಷಿತವಾಗಿರುತ್ತದೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಸ್ಥಾಪನೆಯಾಗಬೇಕಿದ್ದ ಹೂಡಿಕೆಗಳನ್ನು ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ತಿರುಗಿಸುತ್ತದೆ. ನಿಜವಾಗಿಯೂ ಗುಜರಾತ್ ಮತ್ತು ಅಸ್ಸಾಂನಲ್ಲಿ ಆ ಕೈಗಾರಿಕೆಗೆ ಅಗತ್ಯವಿರುವ ನೈಪುಣ್ಯ ಮತ್ತು ಮೂಲಸೌಕರ್ಯಗಳು ಇದ್ಯಾ ಎಂದು ಪ್ರಶ್ನಿಸಿದ್ದರು. ಅಸ್ಸಾಂ ಉದ್ದೇಶಿಸಿ ಹೇಳಿಕೆ ನೀಡಿದ್ದು ಬಿಜೆಪಿಯನ್ನು ಕೆರಳಿಸಿದೆ. ಇದು ಅಸ್ಸಾಂ ಯುವಜನರಿಗೆ ಮಾಡಿರುವ ಅನ್ಯಾಯ? ಅಸ್ಸಾಂ ಕಾಂಗ್ರೆಸ್ ಈ ಹೇಳಿಕೆಯನ್ನು ಖಂಡಿಸಬೇಕು ಎಂದು ಆಗ್ರಹಿಸಿದೆ.
