ಉದಯವಾಹಿನಿ, ಪಾಟ್ನಾ: ಚುನಾವಣಾ ತಂತ್ರಜ್ಞ, ರಾಜಕಾರಣಿ ಪ್ರಶಾಂತ್ ಕಿಶೋರ್ ಅವರ ಹೆಸರು ಬಿಹಾರ ಹಾಗೂ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳಲ್ಲಿ ಕಂಡು ಬಂದಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಹಾರ ಚುನಾವಣೆ ಹೊತ್ತಲ್ಲೇ ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಜನ್ ಸೂರಜ್ ಪಕ್ಷದ ಮೂಲಕ ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆ ಅಖಾಡದಲ್ಲಿ ಪ್ರಶಾಂತ್ ಕಿಶೋರ್ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ಭಾರೀ ಪ್ರಚಾರದ ಭರದಲ್ಲಿರುವ ಅವರಿಗೆ ಈ ಸುದ್ದಿ ಆಘಾತ ಮೂಡಿಸಿದೆ.
ಅಧಿಕೃತ ದಾಖಲೆಗಳ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಲ್ಲಿದೆ. 121, ಕಾಲಿಘಾಟ್ ರಸ್ತೆ ವಿಳಾಸದಲ್ಲಿ ನೋಂದಣಿಯಾಗಿದ್ದು, ಇದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಚೇರಿಯ ವಿಳಾಸವಾಗಿದೆ. ಈ ಕ್ಷೇತ್ರವು ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಯ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!