ಉದಯವಾಹಿನಿ, ನೈರೋಬಿ,: ಮಂಗಳವಾರ ಬೆಳಗ್ಗೆ ಕೀನ್ಯಾದ ಕರಾವಳಿ ಪ್ರದೇಶ ಕ್ವಾಲೆಯಲ್ಲಿ ಮಾಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 11 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ . ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋ ಮೀಟರ್ ದೂರದಲ್ಲಿರುವ ಗುಡ್ಡಗಾಡು ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕ್ವಾಲೆ ಕೌಂಟಿ ಆಯುಕ್ತ ಸ್ಟೀಫನ್ ಒರಿಂಡೆ ಅಸೋಸಿಯೇಟೆಡ್ ಈ ಬಗ್ಗೆ ಮಾತನಾಡಿ, ಪ್ರಯಾಣಿಕರೆಲ್ಲರೂ ವಿದೇಶಿ ಪ್ರವಾಸಿಗರು ಎಂದು ತಿಳಿಸಿದ್ದಾರೆ.
ಮೃತರ ಪೈಕಿ 8 ಮಂದಿ ಹಂಗೇರಿ ಪ್ರಜೆಗಳು, ಇಬ್ಬರು ಜರ್ಮನ್‌ ಪ್ರಯಾಣಿಕರು ಮತ್ತು ಕೀನ್ಯಾದ ಕ್ಯಾಪ್ಟನ್‌ ಎಂದು ಗುರಿತಿಸಲಾಗಿದೆ. ಅಪಘಾತದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅಧಿಕಾರಿಗಳಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಕೆಟ್ಟ ಹವಾಮಾನದ ಕಾರಣದಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!