ಉದಯವಾಹಿನಿ, ರಣಜಿ ಟ್ರೋಫಿ ಟೂರ್ನಿಯಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಮೊಹಮ್ಮದ್ ಶಮಿ ಬಿಸಿಸಿಐ ಆಯ್ಕೆದಾರರಿಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ. ತಾವು ಆಡಿದ ಎರಡು ಪಂದ್ಯಗಳಿಂದ ಹಿರಿಯ ವೇಗಿ 15 ವಿಕೆಟ್‌ಗಳೊಂದಿಗೆ ತಮ್ಮ ಫಿಟ್ನೆಸ್ ಬಗ್ಗೆ ಪ್ರಶ್ನಿಸಿದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಂಪೂರ್ಣವಾಗಿ ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ. ಫಿಟ್ ಆಗಿದ್ದರೂ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಹಿಂದಿನ ಟೆಸ್ಟ್ ಸರಣಿಗೆ ಆಯ್ಕೆಯಾಗದಿದ್ದಕ್ಕೆ ಶಮಿ ಅತೃಪ್ತರಾಗಿದ್ದರು. ಇದೀಗ ರಣಜಿ ಟ್ರೋಫಿ ಟೂರ್ನಿಯಲ್ಲಿ ಅವರ ಪ್ರದರ್ಶನದ ಬಳಿಕ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.
ಒಂದು ತಿಂಗಳ ಹಿಂದೆ ಮೊಹಮ್ಮದ್ ಶಮಿ ಟೆಸ್ಟ್ ತಂಡಕ್ಕೆ ಮರಳುವ ಬಗ್ಗೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರನ್ನು ಪ್ರಶ್ನೆ ಕೇಳಿದ್ದಾಗ ಅವರು ಪ್ರತಿಕ್ರಿಯಿಸಿ, ಶಮಿ ಫಿಟ್ನೆಸ್ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದಾಗ್ಯೂ, ಶಮಿ ಫಿಟ್ ಆಗಿದ್ದರೆ, ಅವರು ಖಂಡಿತವಾಗಿಯೂ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಹೋಗುತ್ತಿದ್ದರು ಎಂದು ಅಗರ್ಕರ್ ಸ್ಪಷ್ಟಪಡಿಸಿದ್ದರು. ಮತ್ತೊಂದೆಡೆ, ಶಮಿ ಈ ನಿರ್ಧಾರದಿಂದ ಅತೃಪ್ತರಾಗಿದ್ದರು ಮತ್ತು ತಾವು ಫಿಟ್ ಆಗಿರುವುದಾಗಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧರಿರುವುದಾಗಿ ಘೋಷಿಸಿಕೊಂಡಿದ್ದರು. ಆ ಮೂಲಕ ಚೀಫ್ ಸೆಲೆಕ್ಟರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು.
