ಉದಯವಾಹಿನಿ, ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಜೊತೆ ಫೋಟೋ ತೆಗೆಸಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ. ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು.

ಯಾರಿದು ಶಿವಾಂಗಿ ಸಿಂಗ್‌?: ಆಪರೇಷನ್‌ ಸಿಂಧೂರದ ಸಮಯದಲ್ಲಿ ಪಾಕಿಸ್ತಾನ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು. ಅದರಲ್ಲಿ ಶಿವಾಂಗಿ ಸಿಂಗ್ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಪತನಗೊಂಡ ರಫೇಲ್‌ ಯುದ್ಧ ವಿಮಾನದಿಂದ ಹಾರಿದ್ದ ಶಿವಾಂಗಿ ಸಿಂಗ್‌ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಭಾರತ ಇದಕ್ಕೆ ಪ್ರತಿಕ್ರಿಯಿಸಿ ನಮ್ಮ ಯಾವುದೇ ಪೈಲಟ್‌ಗಳನ್ನು ಪಾಕಿಸ್ತಾನ ಸೆರೆ ಹಿಡಿದಿಲ್ಲ. ಕಾರ್ಯಾಚರಣೆ ನಡೆಸಿ ನಮ್ಮ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿತ್ತು

Leave a Reply

Your email address will not be published. Required fields are marked *

error: Content is protected !!