ಉದಯವಾಹಿನಿ, ಟೆಲ್ ಅವಿವ್: ಹಮಾಸ್‌ನಿಂದ ಕದನ ವಿರಾಮ ಒಪ್ಪಂದ ಉಲ್ಲಂಘನೆಯಾದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಷಣವೇ ಪ್ರಬಲ ದಾಳಿ ನಡೆಸುವಂತೆ ಆದೇಶಿಸಿದ್ದಾರೆ. ಭದ್ರತಾ ಸಮಾಲೋಚನೆಗಳ ನಂತರ, ಪ್ರಧಾನಿ ನೆತನ್ಯಾಹು ಅವರು ಗಾಜಾ ಪಟ್ಟಿ ಮೇಲೆ ತಕ್ಷಣವೇ ಪ್ರಬಲ ದಾಳಿಗಳನ್ನು ನಡೆಸುವಂತೆ ಮಿಲಿಟರಿಗೆ ಸೂಚನೆ ನೀಡಿದ್ದಾರೆ” ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.
ಹಮಾಸ್ ಒತ್ತೆಯಾಳಿನ ಮೃತದೇಹ ಇರುವ ಶವಪೆಟ್ಟಿಗೆಯನ್ನು ಹಸ್ತಾಂತರಿಸಿತ್ತು. ಆದರೆ ಈ ಶವಪೆಟ್ಟಿಗೆಯಲ್ಲಿ ಈ ಹಿಂದೆ ಮರಳಿಸಿದ ಒತ್ತೆಯಾಳಿನ ಮೃತದೇಹದ ಹೆಚ್ಚಿನ ಭಾಗಗಳಿದ್ದವು ಎಂದು ಇಸ್ರೇಲ್ ಹೇಳಿದೆ.ಸೋಮವಾರ ಹಸ್ತಾಂತರಿಸಲಾದ ದೇಹದ ಭಾಗಗಳು ಓಫಿರ್ ಝರ್ಫಾಟಿ ಎಂಬವರಿಗೆ ಸೇರಿದೆ ಎನ್ನುವುದು ವಿಧಿವಿಜ್ಞಾನ ಪರೀಕ್ಷೆಗಳಿಂದ ದೃಢಪಟ್ಟಿತ್ತು. ಆದರೆ ಅವರ ಮೃತ ದೇಹವನ್ನು 2023ರ ಕೊನೆಯಲ್ಲಿ ಇಸ್ರೇಲ್ ಪಡೆಗಳು ವಶಪಡಿಸಿದ್ದವು. ಈಗ ಕಳುಹಿಸಿದ ಮೃತದೇಹಗಳು ಗಾಜಾದಲ್ಲಿ ಮೃತಪಟ್ಟ 13 ಮೃತ ಒತ್ತೆಯಾಳುಗಳದ್ದಲ್ಲ ಎಂದು ಎಂದು ತಿಳಿಸಿದೆ. ಅಮೆರಿಕ ನೇತೃತ್ವದಲ್ಲಿ ಅರಬ್ ರಾಷ್ಟ್ರಗಳ ಸಮ್ಮುಖದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಬೇರೆ ವ್ಯಕ್ತಿಯ ಮೃತದೇಹವನ್ನು ಕಳುಹಿಸಿ ಹಮಾಸ್ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಇಸ್ರೇಲ್ ಹೇಳಿದೆ.
