ಉದಯವಾಹಿನಿ, ಲಖನೌ: ಬೆಳ್ಳಂ ಬೆಳ್ಳಗ್ಗೆ ಘೋರ ದುರಂತವೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದ ಪ್ರಯಾಣಿಕರ ಮೇಲೆ ರೈಲೊಂದು ಹರಿದಿದ್ದು, ಹಲವರು ಸಾವನ್ನಪ್ಪಿದ್ದಾರೆ. ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಚೋಪನ್‌ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.
ಮಿರ್ಜಾಪುರದ ಚುನಾರ್ ರೈಲ್ವೇ ನಿಲ್ದಾಣದಲ್ಲಿ ಈ ಘೋರ ದುರಂತ ಸಂಭವಿಸಿದೆ. ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಚೋಪನ್‌ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದರು. ಘಟನೆ ಚುನಾರ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದ ಯಾತ್ರಿಕರು ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ್ದರು. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ರೈಲಿನ ಪ್ಲಾಟ್‌ಫಾರ್ಮ್ ಬದಿಯಲ್ಲಿ ಇಳಿಯದೆ ಮತ್ತೊಂದು ಕಡೆ ಇಳಿದು ಹಳಿಯನ್ನು ದಾಟಲು ಯತ್ನಿಸಿದ್ದಾರೆ. ಆಗ ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
