ಉದಯವಾಹಿನಿ, ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಆಕಾಶ್ (31) ಎಂದು ಗುರುತಿಸಲಾಗಿದೆ. ಓವರ್ ಹೆಡ್ ಟ್ಯಾಂಕ್‍ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮೇಲೆ ನಿಂತು ಅವರು ಪೈಂಟ್ ಮಾಡುತ್ತಿದ್ದರು. ಈ ವೇಳೆ, ಕಬ್ಬಿಣದ ರಾಡ್ ಮುರಿದಿದೆ. ಈ ವೇಳೆ ಟ್ಯಾಂಕ್ ಮೇಲಿನಿಂದ ಅವರು ಕೆಳಗೆ ಬಿದ್ದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!