ಉದಯವಾಹಿನಿ, ಪಟನಾ: ಬಿಹಾರದಲ್ಲಿ ಮತದಾನ ಪ್ರಕ್ರಿಯೆ ವೇಳೆ ಹೈಡ್ರಾಮಾವೊಂದು ನಡೆದಿದೆ. ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕ್ಷೇತ್ರವಾದ ಲಖಿಸರಾಯ್‌ನಲ್ಲಿ ಅವರ ಬೆಂಗಾವಲು ಪಡೆಗೆ ಜನರ ಗುಂಪೊಂದು ಅಡ್ಡಗಟ್ಟಿ ಕಲ್ಲು ಹಾಗೂ ಚಪ್ಪಲಿಗಳ ತೂರಾಟ ನಡೆಸಿದೆ ಎಂದು ತಿಳಿದು ಬಂದಿದೆ. ವಿಜಯ್ ಕುಮಾರ್ ಸಿನ್ಹಾ ಮತಗಟ್ಟೆ ಬಳಿ ಬಂದಾಗ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಮೂರು ಬಾರಿ ಶಾಸಕರಾಗಿರುವ ಸಿನ್ಹಾ ಈ ಬಾರಿಯೂ ತಮ್ಮ ತವರು ಕ್ಷೇತ್ರವಾದ ಭೂಮಿಹಾರ್‌ನಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿತ ಗೂಂಡಾಗಳು ಎಂದು ಅವರು ಆರೋಪಿಸಿದ್ದಾರೆ.
ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ನಾವು ಅವರ ಎದೆಯ ಮೇಲೆ ಬುಲ್ಡೋಜರ್‌ಗಳನ್ನು ಓಡಿಸುತ್ತೇವೆ” ಎಂದು ಘಟನೆಯ ನಂತರ ಕೋಪಗೊಂಡ ಅವರು ಹೇಳಿದರು. ಕೆಲವು ಬೂತ್‌ಗಳಲ್ಲಿ ಬೂತ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. “ನನ್ನ ಮತಗಟ್ಟೆ ಏಜೆಂಟ್ ಅನ್ನು ಬೂತ್‌ನಿಂದ ಹೊರಗೆ ಎಸೆಯಲಾಯಿತು. ಜನರಿಗೆ ಮತ ಚಲಾಯಿಸಲು ಅವಕಾಶ ನೀಡುತ್ತಿಲ್ಲ” ಎಂದು ಸಿನ್ಹಾ ಹೇಳಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜಿಲ್ಲೆಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಜಯ್ ಕುಮಾರ್, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಎರಡು ಮತಗಟ್ಟೆಗಳಲ್ಲಿ ಬಿಜೆಪಿಯ ಮತಗಟ್ಟೆ ಏಜೆಂಟ್ ಅನ್ನು ಬೆದರಿಸಲಾಗಿದೆ ಎಂಬ ಆರೋಪಗಳನ್ನು ಐಪಿಎಸ್ ಅಧಿಕಾರಿ ತಳ್ಳಿಹಾಕಿದ್ದಾರೆ. ಇಡೀ ಜಿಲ್ಲೆಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಮತದಾನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!