ಉದಯವಾಹಿನಿ, ಸಿಂಧನೂರು: ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ತಾಲ್ಲೂಕು ತಹಶೀಲ್ದಾರ್ ಅವರ ಮೂಲಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರ ಅವರಿಗೆ ಜಯ ಕರ್ನಾಟಕ ತಾಲ್ಲೂಕು ಸಂಘಟನೆ ವತಿಯಿಂದ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು. ನಂತರ ಮಾತನಾಡಿದ (ಮುತ್ತಪ್ಪ ರೈ ಸ್ಥಾಪಿಸಿದ) ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಬಸವರಾಜ ಬಡಿಗೇರ್ ಅವರ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಗಳ ಕಟ್ಟಡಗಳೂ ಬಿರುಕು ಬಿಟ್ಟು ಶಿಥಿಲಾವಸ್ಥೆಯಲ್ಲಿವೆ. ಬಾಗಿಲು, ಕಿಟಕಿ ಮುರಿದು ಹೋಗಿದೆ. ನೆಲಹಾಸು ಬಂಡೆಗಳೂ ಕಿತ್ತು ಬಂದಿವೆ. ಇದಲ್ಲದೆ ಕುಡಿಯುವ ನೀರು, ಶೌಚಾಲಯಗಳ ಸಮಸ್ಯೆಗಳಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಗುಣಮಟ್ಟದ ಆಹಾರ ವಸ್ತುಗಳನ್ನು ಬಳಕೆ ಮಾಡಿ ಮಧ್ಯಾಹ್ನ ಬಿಸಿಯೂಟವನ್ನು ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಹೇಳಿದರು. ತಾಲ್ಲೂಕು ವ್ಯಾಪ್ತಿಯಲ್ಲಿ ಇಷ್ಟೆಲ್ಲ ಸಮಸ್ಯೆಗಳಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರೂ ಸಹ ಶಾಸಕರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿರುವುದು ಖಂಡನೀಯವಾಗಿದೆ ಎಂದರು. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡ ಶಾಸಕರ ಮೇಲೆ ಇದ್ದಂತಿದೆ, ಶಾಸಕರು ಖಾಸಗಿ ಪ್ರೇಮ ಬಿಟ್ಟು ಸರ್ಕಾರಿ ಶಾಲೆಗಳ ಪ್ರಗತಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಈ ಮೂಲಕ ಒತ್ತಾಯ ಮಾಡಿದರು ಅಧಿಕಾರಿಗಳು ಒಂದು ವೇಳೆ ನಿರಾಕರಿಸಿದರಿ ಮುಂದೆ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ರಾಮದಾಸ್ ಸಾಲುಗುಂದ ತಾಲ್ಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
