ಉದಯವಾಹಿನಿ, ಚಾಮರಾಜನಗರ: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ (ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚಿಸಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಚೌಡಯ್ಯ ನಾಯ್ಕ (35) ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
