ಉದಯವಾಹಿನಿ, ನವದೆಹಲಿ: ಸ್ವಾತಂತ್ರ್ಯ ಹೋರಾಟ ಮತ್ತು ಏಕತೆಯ ಸಂಕೇತವಾದ ವಂದೇ ಮಾತರಂ.. ರಾಷ್ಟ್ರೀಯ ಗೀತೆಯ 150 ವರ್ಷಗಳನ್ನು 150 Years) ದೇಶಾದ್ಯಂತ ಶುಕ್ರವಾರ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಂದೆಡೆ ವರ್ಷಪೂರ್ತಿ ಆಚರಣೆಗೆ ಚಾಲನೆ ನೀಡಿದರೆ ಇನ್ನೊಂದೆಡೆ ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಗೀತೆಯ ಪರಂಪರೆಯನ್ನು ನೆನಪಿಸಿಕೊಂಡು ನಿರಂತರ ಏಕತೆಯ ಸಂದೇಶವನ್ನು ಸಾರಿದರು. ದೇಶದ ಈ ಐತಿಹಾಸಿಕ ದಿನದ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿತು.
ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ನವೆಂಬರ್ 7 ಪ್ರತಿಯೊಬ್ಬ ಭಾರತೀಯನಿಗೂ ಒಂದು ಸ್ಮರಣಾರ್ಥ ದಿನ. ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿದ್ದೇವೆ. ಇದು ರಾಷ್ಟ್ರದಾದ್ಯಂತ ದೇಶಭಕ್ತಿಯ ಮನೋಭಾವವನ್ನು ಹೊತ್ತಿಸಿದ ಒಂದು ರೋಮಾಂಚಕಾರಿ ಕ್ಷಣವಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಾಡಿನ ಪರಂಪರೆಯನ್ನು ನೆನೆದು ಗೌರವ ಸಲ್ಲಿಸಿದರು. ಹಾಡಿನ ಮೂಲ ಮತ್ತು ಪ್ರಭಾವವನ್ನು ಸ್ಮರಿಸಿದ ಅವರು, 1905ರ ಸ್ವದೇಶಿ ಚಳವಳಿಯ ಕಾಲದಿಂದಲೂ ಎಲ್ಲರಿಗೂ ಸ್ಫೂರ್ತಿಯಾಗಿರುವ ಹಾಡು ವಂದೇ ಮಾತರಂ. ಇದನ್ನು ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!