ಉದಯವಾಹಿನಿ,ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವಂತ ಇಬ್ಬರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ. ಇಂದು ಜೈನಮುನಿ ಕಾಮಕುಮಾರನಂದಿ ಮಾಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಎ.1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ದಲಾಯತ್ ಅನ್ನು ಚಿಕ್ಕೋಡಿಯ 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಇಬ್ಬರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತು. ಹೀಗಾಗಿ ಆರೋಪಿಗಳನ್ನು ಪೊಲೀಸರು ಮೆಡಿಕಲ್ ಟೆಸ್ಟ್ ಗೆ ಒಳಪಡಿಸುತ್ತಿದ್ದು, ಈ ಬಳಿಕ ಜೈನ ಮುನಿಶ್ರೀ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಯನ್ನು ಕೈಗೊಳ್ಳಲಿದ್ದಾರೆ.
