ಉದಯವಾಹಿನಿ, ಮೈಸೂರು: ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ದಾರೆ.ʼದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ.? ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇʼ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಬಾಂಬ್ ಸ್ಫೋಟಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು? ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

Leave a Reply

Your email address will not be published. Required fields are marked *

error: Content is protected !!