ಉದಯವಾಹಿನಿ, ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ಸ್ಫೋಟದಲ್ಲಿ 9 ಜನ ಸಾವನ್ನಪ್ಪಿದ್ದು, ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಸ್ಥರ ಕನಸು ಛಿದ್ರವಾಗಿದೆ. ಬಿಹಾರದ ಪಂಕಜ್ ಸೈನಿ (22), ಕ್ಯಾಬ್ ಚಾಲಕನಾಗಿದ್ದು, ಚಾಂದನಿ ಚೌಕ್‌ನಲ್ಲಿ ಒಬ್ಬ ಪ್ರಯಾಣಿಕನನ್ನು ಇಳಿಸಿದ್ದ. ಉತ್ತರ ಪ್ರದೇಶದ ಶಾಮ್ಲಿಯ ನೋಮನ್ ತನ್ನ ಸೌಂದರ್ಯವರ್ಧಕ ಅಂಗಡಿಗೆ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಅಲ್ಲಿಗೆ ಬಂದಿದ್ದ. ಮತ್ತೊಬ್ಬ ದೆಹಲಿ ಸಾರಿಗೆ ನಿಗಮದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅಶೋಕ್ ಕುಮಾರ್, ಘಟನೆಯಲ್ಲಿ ವ್ಯಕ್ತಿಯೊಬ್ಬನನ್ನು ಭೇಟಿ ಮಾಡಲು ಅಲ್ಲಿಗೆ ಬಂದಿದ್ದ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತರ ಕುಟುಂಬಸ್ಥರು ಕಣ್ಣೀರಿನ ಕತೆ ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಪಂಕಜ್ ಸೈನಿಯವರ ತಂದೆ ಮಾತನಾಡಿ, ನಮ್ಮ ಕುಟುಂಬದಲ್ಲಿ ದುಡಿಯುವ ಏಕೈಕ ವ್ಯಕ್ತಿಯಾಗಿದ್ದ ನನ್ನ ಮಗನಾಗಿದ್ದ ಎಂದು ಭಾವುಕರಾಗಿದ್ದಾರೆ. ನಾನು ಏನು ಹೇಳಲಿ? ಪಂಕಜ್ ಚಾಂದನಿ ಚೌಕ್‌ನಲ್ಲಿ ಒಬ್ಬ ಪ್ರಯಾಣಿಕನನ್ನು ನನ್ನ ಮಗ ಇಳಿಸಿದ್ದ. ಈ ವೇಳೆ ಸ್ಫೋಟ ಸಂಭವಿಸಿದೆ. ನಾವು ಸರ್ಕಾರದಿಂದ ನ್ಯಾಯವನ್ನು ಕೋರುತ್ತೇವೆ, ನ್ಯಾಯ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.
