ಉದಯವಾಹಿನಿ, ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕೆಲವು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ ಪತ್ನಿ ನಟಿ, ಸಂಸದೆ ಹೇಮಾಮಾಲಿನಿ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ.
ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು ವರದಿ ಪ್ರಸಾರ ಮಾಡಿದ್ದವು. ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಳ್ಳಲು ಆರಂಭಿಸಿದ್ದರು.
