ಉದಯವಾಹಿನಿ, ನವದೆಹಲಿ: ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಿಳಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್‌ಸಿಬಿ, ದೆಹಲಿ ನಮ್ಮ ಹೃದಯದಲ್ಲಿದೆ. ದೆಹಲಿ ಸದೃಢವಾಗಿರಿ ಎಂದು ಹೇಳಿದೆ. ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿತು. ಸ್ಫೋಟದ ತೀವ್ರತೆಗೆ ಹಲವು ದೇಹಗಳು ಛಿದ್ರವಾದವು. ಘಟನೆಯಲ್ಲಿ 17 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿತು. 6 ಕಾರುಗಳು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಉರಿದವು. ಘಟನೆ ನಂತರ ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
