ಉದಯವಾಹಿನಿ, ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ) ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.
