ಉದಯವಾಹಿನಿ, ನವದೆಹಲಿ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ಈ ಹಿಂದೆ ವಜಾಗೊಂಡಿದ್ದ ಪ್ರಾಧ್ಯಾಪಕನೊಬ್ಬನನ್ನು ಅಲ್‌ ಫಲಾಹ್‌ ವಿಶ್ವವಿದ್ಯಾಲಯ ಮತ್ತೆ ನೇಮಕ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫರಿದಾಬಾದ್‌ನಲ್ಲಿರುವ ಅಲ್‌ ಫಲಾಹ್‌ ವಿವಿ ಕೂಡ ತನಿಖೆಗೆ ಒಳಪಟ್ಟಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ರಿಂದ ಪ್ರಾಧ್ಯಾಪಕನೊಬ್ಬ ವಜಾಗೊಂಡಿದ್ದ. ಆದರೆ, ಈ ವಿವಿ ಆತನನ್ನು ಮತ್ತೆ ನೇಮಕ ಮಾಡಿಕೊಂಡಿತ್ತು.
ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ನಿಸಾರ್-ಉಲ್-ಹಸನ್‌ನನ್ನು 2023 ರಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂವಿಧಾನದ 311(2)(ಸಿ) ವಿಧಿಯ ಅಡಿಯಲ್ಲಿ ವಜಾಗೊಳಿಸಿದ್ದರು. ರಾಜ್ಯದ ಭದ್ರತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆಯಿಲ್ಲದೆ ಸಾರ್ವಜನಿಕ ಸೇವಕನನ್ನು ವಜಾಗೊಳಿಸಲು ಈ ನಿಬಂಧನೆ ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಡಾ. ನಿಸಾರ್-ಉಲ್-ಹಸನ್ ವಜಾಗೊಳ್ಳುವ ಮೊದಲು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಯಲ್ಲಿ ಸಹಾಯಕ ವೈದ್ಯಕೀಯ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿದ್ದ.

Leave a Reply

Your email address will not be published. Required fields are marked *

error: Content is protected !!