ಉದಯವಾಹಿನಿ, ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
ಕೆಳ ಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್‌ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಯಡಿಯೂರಪ್ಪ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿದೆ.

ಏನಿದು ಪ್ರಕರಣ..?: ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024 ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!