
ಉದಯವಾಹಿನಿ, ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಸಮುದ್ರದ ಪಾಲಾದ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಅವರು ಕೊಚ್ಚಿ ಹೋಗಿದ್ದಾರೆ. ಅವರು ತಮ್ಮ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ.
ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
