ಉದಯವಾಹಿನಿ, ಕಲಬುರಗಿ: ಒಂದು ತಿಂಗಳಿನಿಂದ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಭಗವಾ ಧ್ವಜ ಹಾರಿಸಿ ಆರ್‌ಎಸ್‌ಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು.
ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ,ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಯಿತು. ಹೈಕೋರ್ಟ್ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿತ್ತು.
ಆರ್‌ಎಸ್‌ಎಸ್ 100 ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಡೆದ ಪಥಸಂಚಲನದಲ್ಲಿ ಭಾಗಿಯಾದ ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು.
