ಉದಯವಾಹಿನಿ, ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ನಮ್ಮ ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಬಿಜೆಪಿ ಅವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ನ.28ಕ್ಕೆ ನಾವು ಅಂಗನವಾಡಿ ಆರಂಭಿಸಿ 50 ವರ್ಷ ಆಯಿತು. ಕರ್ನಾಟಕದಿಂದಲೇ ಅಂಗನವಾಡಿ ಶುರುವಾಗಿದ್ದು. 1975ರಲ್ಲಿ ಇಂದಿರಾಗಾಂಧಿ ಅವರು ಮೈಸೂರಿನ ಟಿ.ನರಸೀಪುರದಲ್ಲಿ ಪ್ರಾರಂಭ ಮಾಡಿದರು. ಐವತ್ತು ವರ್ಷದ ಹಿನ್ನೆಲೆ ಸುವರ್ಣ ಮಹೋತ್ಸವ ಆಚರಿಸುತ್ತಿದ್ದೇವೆ. ಇಲಾಖೆಯಿಂದ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಅದಕ್ಕಾಗಿ 10 ಜಿಲ್ಲೆಗಳಲ್ಲಿ ಪೂರ್ವಭಾವಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದು ಕೇವಲ ಸಂಭ್ರಮವಲ್ಲ ಇಂದಿರಾಗಾಂಧಿ ಅವರ ಕನಸನ್ನು ಯಾವ ರೀತಿ ತೆಗೆದುಕೊಂಡು ಹೋಗಬೇಕು ಎಂಬುದನ್ನು ಘೋಷಣೆ ಮಾಡುತ್ತೇವೆ.

Leave a Reply

Your email address will not be published. Required fields are marked *

error: Content is protected !!