ಉದಯವಾಹಿನಿ, ಚಿಕ್ಕಬಳ್ಳಾಪುರ: ಹೈವೇಯಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಬೈಕ್ ಸವಾರರಿಗೆ ಚಾಕು ಇರಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಬೈಕ್ ಸವಾರರಿಗೆ ಚಾಕು ಇರಿದ ಮಹಿಳಾ ಟೆಕ್ಕಿಯನ್ನು ಬಿಹಾರ ಮೂಲದ ರಿಂಬಿಕಾ ಕುಮಾರಿ ಎಂದು ಗುರುತಿಸಲಾಗಿದೆ. ಈಕೆ ತನ್ನ ತಮಿಳುನಾಡು ನೋಂದಣಿಯ ಸ್ಕೂಟಿ ಏರಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕಡೆಗೆ ಬಂದು ವಾಪಾಸ್ ಬೆಂಗಳೂರಿನತ್ತ ತೆರಳುತ್ತಿದ್ದಳು. ಈ ವೇಳೆ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಡ್ಡಾ ದಿಡ್ಡಿಯಾಗಿ ಸ್ಕೂಟಿ ಒಡಿಸ್ತಾ ಹಿಂದೆ ಬರ್ತಿದ್ದ ಸವಾರರಿಗೆ ಇರುಸು ಮುರುಸು ಉಂಟು ಮಾಡಿದ್ದಳು. ಹೀಗಾಗಿ ವಾಪಸಂದ್ರೆ ಸೇತುವೆ ಕೆಳಗಡೆ ಸ್ಕೂಟಿ ನಿಲ್ಲಿಸಿ ನಿಂತಿದ್ದ ಈಕೆಯನ್ನ ಹಿಂಬದಿ ಬರುತ್ತಿದ್ದ ಬೈಕ್ ಸವಾರರಾದ ನಿಖಿಲ್ ಹಾಗೂ ನರಸಿಂಹಮೂರ್ತಿ ಪ್ರಶ್ನೆ ಮಾಡಿದ್ದಾರೆ.
