ಉದಯವಾಹಿನಿ, ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ.
ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ. ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿ ಬ್ಯಾಕ್ಟೀರಿಯಾ ನಾಶ ಮಾಡುವ ಪ್ರಯತ್ನ ಮಾಡಿದ್ದಾರೆ. ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಗೂ ಎಚ್ಚರಿಕೆ ಸಂದೇಶವನ್ನು ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!