ಉದಯವಾಹಿನಿ, ತಿರುವನಂತಪುರಂ: ಕೇರಳದಲ್ಲಿ ಭಾರತೀಯ ಚುನಾವಣಾ ಆಯೋಗ ಕೈಗೊಳ್ಳಲು ಹೊರಟಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನ ಮುಂದೂಡುವಂತೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಎಸ್‌ಐಆರ್ (ಸರ್) ಪ್ರಕ್ರಿಯೆ ಮುಂದೂಡಬೇಕೆಂದು ಕೇರಳ ಸರ್ಕಾರ ಕೋರಿದೆ. ರಾಜ್ಯದಲ್ಲಿ ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ. ಅದೇ ಹೊತ್ತಿಗೆ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿದರೆ ಭದ್ರತಾ ವ್ಯವಸ್ಥೆ ಮೇಲೆ ಒತ್ತಡ ಉಂಟಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆ ನಡೆಯುವುದು 2026ರ ಮೇ ತಿಂಗಳಿನಲ್ಲಿ. ಆದ್ದರಿಂದ ಎಸ್‌ಐಆರ್ ತುರ್ತಾಗಿ ನಡೆಸುವ ಅಗತ್ಯವಿಲ್ಲ. ತಾನು ಇಡೀ ಎಸ್‌ಐಆರ್ ಪ್ರಕ್ರಿಯೆಯನ್ನ ಪ್ರತ್ಯೇಕವಾಗಿ ಪ್ರಶ್ನಿಸಬಹುದಾದರೂ ಈ ಅರ್ಜಿ ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದೂಡುವಂತೆ ಮಾತ್ರ ಕೇಳುತ್ತಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.
