ಉದಯವಾಹಿನಿ, ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ( ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ ದರೋಡೆಕೋರರು ಕೋಟ್ಯಂತರ ರೂಪಾಯಿ ದರೋಡೆ ಮಾಡಿದೆ. ಬೆಂಗಳೂರಿನ ಜಯದೇವ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ (ಅಶೋಕ ಪಿಲ್ಲರ್‌ ಬಳಿ) ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೈರಿ ಸರ್ಕಲ್​ನಲ್ಲಿ ಇನ್ನೋವಾದಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್​​ಬಿಐನವರು ಎಂದು ಹೇಳಿ ಹೆದರಿಸಿದ್ದಾರೆ. ಗನ್​​ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನ ಡೈರಿ ಸರ್ಕಲ್​ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!