ಉದಯವಾಹಿನಿ, ಚಿತ್ರದುರ್ಗ: ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತೀರ್ಪನ್ನು ನ.26ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ನಡೆದ ಮುರುಘಾಶ್ರೀ ಪ್ರಕರಣದ ವಿಚಾರಣೆಯು ಅಂತಿಮಘಟ್ಟಕ್ಕೆ ತಲುಪಿದೆ. ಸರ್ಕಾರಿ ವಕೀಲ ಜಗದೀಶ್ ವಾದ ಮುಕ್ತಾಯಗೊಂಡಿದೆ. ವಾದ ಪ್ರತಿವಾದವನ್ನು ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ಆಲಿಸಿದೆ. ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ
ವಾದ ಆಲಿಸಿದ ನ್ಯಾಯಾಲಯ ನ.26ಕ್ಕೆ ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ. ಈ ಮೂಲಕ ಸತತ ಎರಡು ವರ್ಷಗಳಿಂದ ನಡೆದ ಮುರುಘಾಶ್ರೀ ವಿರುದ್ಧದ ಪ್ರಕರಣದ ತೀರ್ಪಿನತ್ತ ಎಲ್ಲರ ಗಮನ ಸೆಳೆದಿದೆ.
ಏನಿದು ಪ್ರಕರಣ:ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.
