ಉದಯವಾಹಿನಿ, ದೆಹಲಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ, ಅನ್ಮೋಲ್ ಬಿಷ್ಣೋಯ್‌ನನ್ನ ಅಮೆರಿಕದಿಂದ ಗಡಿಪಾರು ಮಾಡಲಾಗುತ್ತಿದೆ. ಅನ್ಮೂಲ್‌ನನ್ನ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. ಅಮೆರಿಕದ ಗೃಹ ಇಲಾಖೆ, ಸಿದ್ದಿಕಿ ಅವರ ಪುತ್ರ ಜೀಶಾನ್ ಸಿದ್ದಿಕಿಗೆ ಇ-ಮೇಲ್ ಮೂಲಕ ಈ ವಿಷಯವನ್ನ ಖಚಿತಪಡಿಸಿದೆ ಎಂದು ತಿಳಿದುಬಂದಿದೆ. ಅನ್ಮೋಲ್ ಬಿಷ್ಣೋಯ್‌ನನ್ನ ಅಮೆರಿಕದಿಂದ ಭಾರತಕ್ಕೆ ಗಡಿಪಾರು ಮಾಡಲಾಗುತ್ತಿದ್ದು, ಬುಧವಾರ ಬೆಳಗ್ಗೆ 10 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ್ಯತೆಗಳಿವೆ.
ಅನ್ಮೋಲ್ ಬಿಷ್ಣೋಯ್ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರ. ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿಯೇ ಇದ್ದರೂ ಜಾಗತಿಕ ಕ್ರಿಮಿನಲ್ ಜಾಲವನ್ನ ನಡೆಸುತ್ತಿದ್ದಾನೆ ಎಂಬ ಆರೋಪವಿದೆ
