ಉದಯವಾಹಿನಿ, ಅಮರಾವತಿ: ಕಳೆದ ಎರಡು ದಶಕಗಳಲ್ಲಿ ಹಲವಾರು ದಾಳಿಗಳನ್ನು ನಡೆಸಿದ್ದ ನಕ್ಸಲ್ ನಾಯಕ ಮದ್ವಿ ಹಿಡ್ಮಾ ಹತ್ಯೆಯ ಮರುದಿನವೇ ಆಂಧ್ರಪ್ರದೇಶದಲ್ಲಿ ದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಸಂಘರ್ಷದಲ್ಲಿ ಏಳು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮೂವರು ಮಹಿಳಾ ಮಾವೋವಾದಿಗಳು ಸೇರಿದ್ದು, ಮೃತರಲ್ಲಿ ಒಬ್ಬರನ್ನು ಮೇತುರಿ ಜೋಖಾ ರಾವ್ ಅಲಿಯಾಸ್ ಶಂಕರ್ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಮಾರೆಡುಮಿಲ್ಲಿಯಲ್ಲಿ ಬುಧವಾರ ಬೆಳಗ್ಗೆಯೇ ಈ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಪಿ ಗುಪ್ತಚರ ಎಡಿಜಿ ಮಹೇಶ್ ಚಂದ್ರ ಲಡ್ಡಾ, ನಕ್ಸಲ್ ನಾಯಕ ಮದ್ವಿ ಹಿಡ್ಮಾ ಹತ್ಯೆಯ ಬಳಿಕ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಮುಂದುವರಿಸಿರುವ ಭದ್ರತಾ ಪಡೆಗಳು ಮಾರೆಡುಮಿಲ್ಲಿಯಲ್ಲಿ ಬುಧವಾರ ಮುಂಜಾನೆ ನಡೆಸಿದ ಗುಂಡಿನ ಚಕಮಕಿಯಲ್ಲಿ ಏಳು ಮಾವೋವಾದಿಗಳನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದ್ದು, ಏಳು ಮಂದಿ ಸಾವನ್ನಪ್ಪಿದವರಲ್ಲಿ ಮೂವರು ಮಹಿಳಾ ಮಾವೋವಾದಿಗಳು ಸೇರಿದ್ದಾರೆ. ಮೃತರಲ್ಲಿ ಒಬ್ಬರನ್ನು ಮೇತುರಿ ಜೋಖಾ ರಾವ್ ಅಲಿಯಾಸ್ ಶಂಕರ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದರು. ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಹಿಡ್ಮಾ ಮತ್ತು ಇತರ ಐದು ಜನರನ್ನು ಗುಂಡಿಕ್ಕಿ ಕೊಂದ ಬಳಿಕ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಟಿಆರ್, ಕೃಷ್ಣ, ಕಾಕಿನಾಡ, ಕೊನಸೀಮಾ ಮತ್ತು ಎಲೂರು ಜಿಲ್ಲೆಗಳಲ್ಲಿ 50 ಮಾವೋವಾದಿಗಳನ್ನು ಬಂಧಿಸಲಾಗಿದೆ. ಇದು ಆಂಧ್ರಪ್ರದೇಶದ ಇತಿಹಾಸದಲ್ಲಿ ಅತಿದೊಡ್ಡ ಬಂಧನವಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!