ಉದಯವಾಹಿನಿ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ – ರಮ್ಯಾ ಮುಖ್ಯಪಾತ್ರದಲ್ಲಿ ನಟಿಸಿರುವ ರಕ್ತ ಕಾಶ್ಮೀರ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಈ ಕುರಿತು ಮಾಹಿತಿ ನೀಡಲು ನಿರ್ದೇಶಕರು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಪತ್ರಿಕಾಗೋಷ್ಠಿಗೂ ಮುನ್ನ ಚಿತ್ರದ ಎರಡು ಹಾಡುಗಳು ಹಾಗೂ ಟ್ರೇಲರ್ ಅನ್ನು ಪ್ರದರ್ಶಿಸಲಾಯಿತು.
ರಕ್ತ ಕಾಶ್ಮೀರ ಒಂದು ಸಾಮಾಜಿಕ ಸಂದೇಶವುಳ್ಳ ಚಿತ್ರ. ಭಯೋತ್ಪಾದನೆಯ ವಿರುದ್ದ ಸಮರ ಸಾರುವ ಚಿತ್ರವೂ ಹೌದು. ಉಪೇಂದ್ರ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಈ ಚಿತ್ರದ ನಾಯಕಿ. ಚಿತ್ರದಲ್ಲಿ ನಾಯಕ ಮಕ್ಕಳಿಗೆ ಭಯೋತ್ಪಾದನೆಯ ವಿರುದ್ಧ ಹೋರಾಡುವುದು ಹೇಗೆ ಎಂಬುದನ್ನು ಮಕ್ಕಳಿಗೆ ತರಭೇತಿ ನೀಡಿರುತ್ತಾರೆ. ಈ ಸನ್ನಿವೇಶ ಎದುರಾದಾಗ ಮಕ್ಕಳು ಹೇಗೆ ಪಾರಾಗುತ್ತಾರೆ ಹಾಗೂ ನಗರದಲ್ಲಿ ನಡೆಯಬಹುದಾದಾ ಭಾರಿ ಸ್ಪೋಟವನ್ನು ಹೇಗೆ ತಪಿಸುತ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. “ನಾಗರಹೊಳೆ” ಚಿತ್ರದ ನಂತರ ಮಕ್ಕಳನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಚಿತ್ರವಿದು. ಇದರಲ್ಲಿ ನೂರಕ್ಕೂ ಆಧಿಕ ಮಕ್ಕಳು ಅಭಿನಯಿಸಿದ್ದಾರೆ. ಪ್ರಮುಖಪಾತ್ರದಲ್ಲಿ ಏಳುಜನ ಮಕ್ಕಳು ನಟಿಸಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!