ಉದಯವಾಹಿನಿ, ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ ನತಾಶಾ ಜತೆ ವಿಚ್ಚೇಧನ ಪಡೆದ ಬಳಿಕ ಮಹಿಕಾ ಶರ್ಮಾ ಜೊತೆ ವಿದೇಶಿ ಪ್ರವಾಸ, ಬೀಚ್‌ನಲ್ಲಿ ಸುತ್ತಾಟ ಹೀಗೆ ಹಲವು ಬಾರಿ ಕಾಣಿಸಿಕೊಂಡಿದ್ದರು. ಇದೀಗ ಮಹಿಕಾ ಶರ್ಮಾ ಅವರನ್ನು ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೌದು, ಪಾಂಡ್ಯ ತಮ್ಮ ಪುತ್ರ ಅಗಸ್ತ್ಯ, ಸಾಕು ಪ್ರಾಣಿ, ಕ್ರಿಕೆಟ್ ಅಭ್ಯಾಸದ ಫೋಟೊಗಳ ಜತೆಗೆ ಮಹಿಕಾ ಶರ್ಮಾ ಜತೆಗಿರುವ ರೊಮ್ಯಾಂಟಿಕ್ ಫೋಟೊಗಳನ್ನು ಕೂಡ ಹಂಚಿಕೊಂಡಿದ್ದಾರೆ. ಇದರಲ್ಲೊಂದು ವಿಡಿಯೊ ಕೂಡ ಇದ್ದು ವಿಡಿಯೊದಲ್ಲಿ ಪಾಂಡ್ಯ ಮತ್ತು ಮಹಿಕಾ ಭಜನೆ ಮೂಲಕ ದೇವರನ್ನು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು. ಜತೆಗೆ ಮಹಿಕಾ ಅವರ ಕೆನ್ನೆಗೆ ಮುತ್ತು ನೀಡುತ್ತಿರುವುದು ಕಂಡುಬಂದಿದೆ.
ಮತ್ತೊಂದು ಚಿತ್ರಗಳಲ್ಲಿ, ತಮ್ಮ ವ್ಯಾಯಾಮದ ಸಮಯದಲ್ಲಿ ರೊಮ್ಯಾಂಟಿಕ್ ಆಗಿ ಹಾರ್ದಿಕ್ ಅವರು ಮಹಿಕಾರನ್ನು ಎತ್ತಿಕೊಂಡಿರುವುದನ್ನು ಕಾಣಬಹುದು. ಒಟ್ಟಾರೆ ಇವರಿಬ್ಬರು ಅಧಿಕೃತವಾಗಿ ಡೇಟಿಂಗ್ ನಡೆಸುತ್ತಿದ್ದು ಶೀಘ್ರದಲ್ಲೇ ಹಸೆಮಣೆ ಏರುವ ಸಾಧ್ಯತೆ ಇದೆ. ಮಹಿಕಾ ಶರ್ಮಾ ಮಾಡೆಲ್ ಮತ್ತು ಯೋಗ ಟ್ರೈನರ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟರ್ ಕೂಡ ಆಗಿದ್ದಾರೆ. ಮಹೀಕಾ ಹಲವಾರು ವರ್ಷಗಳಿಂದ ಕೆಲ ಸಂಗೀತ ವೀಡಿಯೊಗಳು, ಕಿರುಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೆಚ್ಚಾಗಿ ಬಿಕಿನಿ ಧರಿಸಿದ ಫೋಟೊ ಮತ್ತು ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ.
