ಉದಯವಾಹಿನಿ, ಬೆಂಗಳೂರು : 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು ಚಿಕ್ಕೋಡಿ ಜೈನಮುನಿ ಹಾಗೂ ಮೈಸೂರು ಯುವಾ ಬ್ರಿಗೇಡ್​​ ಕಾರ್ಯಕರ್ತರ ಹತ್ಯೆ ಭಾರಿ ಚರ್ಚೆಯಾಗುತ್ತಿದೆ. ಇದರೊಂದಿಗೆ ರಾಜ್ಯ ರಾಜಕೀಯ, ಮಳೆ ಸೇರಿದಂತೆ ರಾಜ್ಯದ ಪ್ರಮುಖ ಘಟನೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಟಿವಿ9 ಡಿಜಿಟಲ್ ಲೈವ್​ ಮೂಲಕ ಪಡೆಯಿರಿ. ಕರ್ನಾಟಕದಲ್ಲಿ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಆರಂಭವಾಗಿದೆ. ಇಂದು ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಇಂದು(ಜು.12) ಕಾಂಗ್ರೆಸ್​​ ನಾಯಕರಿಂದ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇನ್ನು ಅಧಿವೇಶನ ಆರಂಭವಾಗುತ್ತಿದ್ದಂತೆ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮತ್ತು ಮೈಸೂರಿನ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಾಕಷ್ಟು ಚರ್ಚೆಯಾಗುತ್ತಿದೆ.

 

Leave a Reply

Your email address will not be published. Required fields are marked *

error: Content is protected !!