ಉದಯವಾಹಿನಿ, ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಬಣದ ಶಾಸಕರು ದೆಹಲಿ ಯಾತ್ರೆ ವಿಚಾರ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ. ನಾಯಕತ್ವ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ. ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನೂ ನಾಲ್ಕು ಜನ ಊಟಕ್ಕೆ ಸೇರಿಕೊಂಡ್ರೆ ಅದರ ಬಗ್ಗೆ ಮಾತನಾಡಲು ಆಗುತ್ತಾ? ಡಿನ್ನರ್ ಪಾಲಿಟಿಕ್ಸ್ಗೆ ನನ್ನನ್ನು ಯಾರೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನಕ್ಕೆ ಬಿಡಬೇಕು ಎಂದರು.
