ಉದಯವಾಹಿನಿ, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ಅನುಪಮಾ ಪರಮೇಶ್ವರನ್ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಫೋಟೋಗಳನ್ನ ಯಾರೋ ಮುಖೇಡಿಗಳು ಮಾರ್ಫ್ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರು ನೀಡಿದ್ದರು. ಆ ಪ್ರಕರಣದಲ್ಲಿ ಆರೋಪಿ ಯಾರು ಅಂತಲೂ ಪತ್ತೆಯಾಗಿದೆ. ಇದೀಗ ಅನುಪಮಾ ಸಹಜ, ಸರಳ ಸುಂದರ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೋ ನೋಡಿ ಅವರ ಅಭಿಮಾನಿಗಳು ಖುಷಿ ಪಡೋದರ ಜೊತೆಗೆ ಮೆಚ್ಚುಗೆಯ ಕಾಮೆಂಟ್ಸ್ ಹಾಕುತ್ತಿದ್ದಾರೆ. ನ್ನಡದಲ್ಲಿ ಅಪ್ಪು ಜೊತೆ ನಟಸೌರ್ವಭೌಮ ಸಿನಿಮಾದಲ್ಲಿ ಪಾತ್ರ ಮಾಡುವ ಮೂಲಕ ಕರ್ನಾಟಕದಲ್ಲೂ ಅಭಿಮಾನಿ ಬಳಗವನ್ನ ಹೊಂದಿದ್ದಾರೆ ನಟಿ ಅನುಪಮಾ ಪರಮೇಶ್ವರ್. ಅವರ ಹೊಸ ಫೋಟೋಗಳು ಜಾಲತಣದಲ್ಲಿ ಸಖತ್ ವೈರಲ್ ಆಗಿವೆ.
