ಉದಯವಾಹಿನಿ, ಮಂಡ್ಯ: ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿ, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ಜೈಲಿಗೂ ಸಹ ಹೋಗಿದ್ದಾರೆ. ನನ್ನ ವೈಯಕ್ತಿಕ ಕಷ್ಟ ಕಾಲದಲ್ಲಿ ಜೊತೆಗೆ ನಿಂತಿದ್ದಾರೆ. ಡಿಕೆಶಿ ಅವರಿಗೆ ಸಿಎಂ ಸ್ಥಾನ ಸಿಗಬೇಕು. ನಮಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಸಮಾನರು. ಇಬ್ಬರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. 140 ಜನ ಶಾಸಕರು ಇಬ್ಬರ ಪರವಾಗಿ ಇದ್ದಾರೆ. ಆದಷ್ಟು ಬೇಗ ಎಲ್ಲವೂ ಒಳ್ಳೆಯದಾಗುತ್ತದೆ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.
ಇನ್ನೂ ನಾನು ದೆಹಲಿಗೆ ಹೋಗಿದ್ದು, ಕೋರ್ಟ್ ಕೆಲಸದ ಮೇಲೆ. ದೇವರಾಣೆ ನನಗೆ ಇತರ ಶಾಸಕರು ಬರುವ ವಿಚಾರ ಗೊತ್ತಿರಲಿಲ್ಲ. ನಾವು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೇಳಲು ಅಷ್ಟೇ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಾವು ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!