ಉದಯವಾಹಿನಿ, ಬೆಂಗಳೂರು: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮತ್ಸ್ಯಮೇಳ ಕಾರ್ಯಕ್ರಮಕ್ಕೆ ಸಿಎಂ ,ಡಿಸಿಎಂ ಒಟ್ಟಿಗೆ ಆಗಮಿಸಿದ್ದಾರೆ. ಮತ್ಸ್ಯಮೇಳದ ಸ್ಟಾಲ್‌ಗಳನ್ನು ಜೊತೆಯಾಗಿ ವೀಕ್ಷಿಸಿದ್ದಾರೆ.
ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ. ಸಿಎಂ ಬಣ ಒಂದುಕಡೆಯಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಬಣ ಮತ್ತೊಂದು ಕಡೆ ಇದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಡಿಕೆಶಿ ಬಣ ದೆಹಲಿ ಪರೇಡ್ ನಡೆಸಿದೆ. ಇದೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಬ್ರದರ್ಸ್ ಪ್ರತ್ಯೇಕವಾಗಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
